ಫೆ.27 : ಪುತ್ತೂರಿನಲ್ಲಿ ಬಾಲವನಕ್ಕೆ ಹೆಜ್ಜೆ ಇಡೋಣ….ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ


Ad Widget

ಪುತ್ತೂರು : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಡಾ.ಶಿವರಾಮ ಕಾರಂತ ಬಾಲವನ ಅಭಿವೃದ್ದಿ ಸಮಿತಿ ಪುತ್ತೂರು,ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಉಪವಿಭಾಗ, ಪುತ್ತೂರು ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ  ಬಾಲವನಕ್ಕೆ ಹೆಜ್ಜೆ ಇಡೋಣ….ಕಾರಂತರ ಕನಸುಗಳಿಗೆ ಜೀವ ತುಂಬೋಣ ..ಸಾಂಸ್ಕೃತಿಕ ಜಾಥಾವು ಫೆ.27ರಂದು ಬೆಳಿಗೆ 8.45ಕ್ಕೆ ಪುತ್ತೂರು ಬಸ್‌ನಿಲ್ದಾಣದಿಂದ ಬಾಲವನದವರೆಗೆ ಸಾಗಲಿದೆ.

ಕಾರ್ಯಕ್ರಮವನ್ನು  ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು.ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಅಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್,ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದಿನ್ ಸಂಪ್ಯ ಪಾಲ್ಗೊಳ್ಳುವರು.


Ad Widget

ಬೆಳಿಗ್ಗೆ 10 ಗಂಟೆಗೆ  ಬಾಲವನದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಡಾ.ಶಿವರಾಮ ಕಾರಂತ ಬಾಲವನ ಅಭಿವೃದ್ದಿ ಸಮಿತಿ ಪುತ್ತೂರು,ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಉಪವಿಭಾಗ, ಪುತ್ತೂರು ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇದರ ನೇತೃತ್ವದಲ್ಲಿ  ತಾಲೂಕು ಯುವಜನ ಒಕ್ಕೂಟ ಪುತ್ತೂರು ,ರಾಷ್ಟ್ಟ್ರೀಯ ಸೇವಾ ಯೋಜನೆ ರಾಜ್ಯ ಕೋಶ ಬೆಂಗಳೂರು ಇದರ ಸಹಕಾರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


Ad Widget

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು.ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಅಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸರಕಾರದ ಜಂಟಿ ಕಾರ್ಯದರ್ಶಿ  ರಾಷ್ಟ್ಟ್ರೀಯ ಸೇವಾ ಯೋಜನೆ ರಾಜ್ಯ ಕೋಶ ಬೆಂಗಳೂರು ಇದರ ರಾಜ್ಯ ಸಂಪರ್ಕಾಽಕಾರಿ ಡಾ.ಗಣನಾಥ ಎಕ್ಕಾರು,ತಹಶಿಲ್ದಾರ್ ರಾಹುಲ್ ಸಿಂಧೆ, ರಾಷ್ಟ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್‌ನ ಅಧ್ಯಕ್ಷ ಡಾ.ಜಾವಿದ್ ಜಮಾದರ್,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ,ನೆಹರು ಯುವಕೇಂದ್ರದ ಸಮನ್ಯಾಽಕಾರಿ ರಘುವೀರ್ ಸೂಟರ್‌ಪೇಟೆ, ತಾ.ಪಂ.ಇಓ ನವೀನ್ ಭಂಡಾರಿ,ನಗರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದಿನ್ ಸಂಪ್ಯ,ಜಿಲ್ಲಾ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್ ಅಂಬೆಕಲ್,ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು ಪಾಲ್ಗೊಳ್ಳುವರು ಎಂದು ಕಾರ್ಯಕ್ರಮ ಸಂಯೋಜಕರಾದ ಕೃಷ್ಣಪ್ಪ ಬಂಬಿಲ,ರಾಜ್ಯ ಯುವ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: