ನಟ ರಕ್ಷಿತ್ ಶೆಟ್ಟಿ,ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಗೆ ಬಂಧನ ಭೀತಿ!

ಬೆಂಗಳೂರು : ಹಾಡೊಂದರ ಟ್ಯೂನ್ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.


Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದರೂ ನಟ ರಕ್ಷಿತ್ ಶೆಟ್ಟಿ ವಿಚಾರಣೆಗೆ ಹಾಜರಾಗಿರಲಿಲ್ಲ, ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ರಕ್ಷಿತ್ ಶೆಟ್ಟಿ ಒಡೆತನದ ಪರಮ್ವಹ ಸ್ಟುಡಿಯೋಸ್ ವಿರುದ್ಧ ಕೃತಿಚೌರ್ಯದ ಪ್ರಕರಣವನ್ನು ಲಹರಿ ಆಡಿಯೋ ದಾಖಲಿಸಿತ್ತು, ಪ್ರಕರಣದ ವಿಚಾರಣೆಗೆ ಪದೇ-ಪದೇ ಗೈರಾದ ಕಾರಣ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಕಿರಿಕ್ ಪಾರ್ಟಿ ಚಿತ್ರದ ಹಾಡೊಂದಕ್ಕೆ ಸಂಬಂಧಿಸಿದಂತೆ ಲಹರಿ ಆಡಿಯೋ ಸಂಸ್ಥೆಯು ಪರಮ್ವಹಾ ಸ್ಟುಡಿಯೋಸ್ ವಿರುದ್ಧ ದೂರು ದಾಖಲಿಸಿತ್ತು.


Ad Widget

ಕಿರಿಕ್ ಪಾರ್ಟಿ ಚಿತ್ರದ ಜನಪ್ರಿಯ ಹಾಡು ‘ಹೂ ಆರ್ ಯು’ ಹಾಡಿನ ಸಂಗೀತವನ್ನು ಲಹರಿ ಆಡಿಯೋ ಒಡೆತನದ ಹಾಡೊಂದರಿಂದ ಕದಿಯಲಾಗಿದೆ ಎಂದು ಪ್ರಕರಣ ದಾಖಲಿಸಲಾಗಿತ್ತು.


Ad Widget

ಪರಮ್ವಹಾ ಸ್ಟುಡಿಯೋಸ್ ಮಾಲೀಕ ರಕ್ಷಿತ್ ಶೆಟ್ಟಿ ಹಾಗೂ ಕಿರಿಕ್ ಪಾರ್ಟಿ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಬಂಧನ ಭೀತಿ ಎದುರಾಗಿದೆ.

error: Content is protected !!
Scroll to Top
%d bloggers like this: