ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟವನ್ನು ಸೇರಿದ ತಿಂಗಳಿನಲ್ಲಿಯೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ.

 

ಈಗಲೇ ಅವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆಪ್ತರಾದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರ ತ್ಯಾಗದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಅವರಿಗೆ ಅನ್ಯಾಯವಾಗಿದೆ ಎಂದಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಜಯಗಳಿಸಿದ್ದರೂ ಮಹೇಶ್ ಕುಮಟಳ್ಳಿ ಅವರಿಗೆ ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಆಗಾಗಿ ಈ ಮಾತನ್ನು ಹೇಳಿದ್ದಾರೆ ಎನ್ನಲಾಗಿದೆ.

(ಏಜೆನ್ಸಿಸ್)

Leave A Reply

Your email address will not be published.