ಪರ್ಪುಂಜ‌ | ರಿಕ್ಷಾಕ್ಕೆ ಕಾರು ಡಿಕ್ಕಿ | ಇಬ್ಬರಿಗೆ ಗಾಯ

ಪುತ್ತೂರು : ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ಯಲ್ಲಿ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ.

ಪುತ್ತೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು‌ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.