ಮಾ.6, 7 | ಪುತ್ತೂರಿನಲ್ಲಿ ರಾಷ್ಟ್ರೀಯ ಸಂಗೀತ ನೃತ್ಯೋತ್ಸವ
ಪುತ್ತೂರು: ನಾಡಿನ ಶಿಷ್ಟ ಕಲೆಗಳಾದ ಕರ್ನಾಟಕ ಶಾಸ್ರ್ತೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನ್ರತ್ಯ, ಕಥಾಕೀರ್ತನ ಮತ್ತು ಗಮಕ ಕಲೆಗಳ ಸರ್ವಾಂಗೀಣ ಅಭಿವ್ರದ್ದಿಗೆ ಹಾಗೂ ಅವುಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವುಗಳನ್ನು ಬೆಳೆಸುವಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಡಿ ಕಾರ್ಯ ನಿರ್ವಹಿಸುವ ಕರ್ನಾಟಕ ಸಂಗೀತ ನ್ರತ್ಯ ಅಕಾಡೆಮಿ ವತಿಯಿಂದ ಪುತ್ತೂರಿನಲ್ಲಿ ಪ್ರಥಮ ಭಾರಿಗೆ ರಾಷ್ಟ್ರೀಯ ಸಂಗೀತ ನ್ರತ್ಯೋತ್ಸವವು ಮಾ.6 ಮತ್ತು 7 ಕ್ಕೆ ನಡೆಯಲಿದೆ. ಕರ್ನಾಟಕ ಸಂಗೀತ ನ್ರತ್ಯ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಕಾಡೆಮಿ ವತಿಯಿಂದ ಪುತ್ತೂರಿನಲ್ಲಿ ಪ್ರಥಮ ಸಂಗೀತ ನ್ರತ್ಯೋತ್ಸವ ಕಾರ್ಯಕ್ರಮ ಹಮ್ಮಿ ಕೊಂಡಿದ್ದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಎರಡು ದಿನಗಳು ಕಾರ್ಯಕ್ರಮ ನಡೆಯಲಿದೆ ಎಂದರು.
ಸಂಗೀತ ಮತ್ತು ನೃತ್ಯ ಕಲೆಗಳನ್ನು ನಾಡಿನ ಮೂಲೆ ಮೂಲೆಗಳಲ್ಲಿ ಚಟುವಟಿಕೆಗಳನ್ನು ನಡೆಸುತ್ತಾ ಎಲೆ ಮರೆ ಕಾಯಂತಿರುವ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ವೇದಿಕೆ ಕಲ್ಪಿಸುವುದು ಅಕಾಡೆಮಿಯ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಮಾ.6 ರಂದು ಸಂಜೆ ಸಂಗೀತ ನ್ರತ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು. ಮುಜರಾಯಿ, ಮಿನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು ಮತ್ತು ಸಂಗೀತ ವಿದ್ವಾಂಸರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಲಿದೆ. ಗೋ಼ಷ್ಠಿ ಗಾಯನ, ಭರತನಾಟ್ಯ, ಹರಿಕಥೆ, ತಬಲಾ, ಖೋಲ್ ವಾದನ ಜುಗಲಬಂದಿ, ಸಿತಾರ್ ವಾದನ ನಡೆಯಲಿದೆ.
ಮಾ.7 ರಂದು ಬೆಳಗ್ಗಿನಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆದು ಸಂಜೆ ಸಮಾರೋಪ ಗೊಳ್ಳಲಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಗೀತ ಪೋಷಕ ಡಾ.ಶ್ರೀಪ್ರಕಾಶ್, ಗಾನ ಸರಸ್ವತಿ ಸಂಗೀತ ಶಾಲೆಯ ವಿದುಷಿ ವೀಣಾ ರಾಘವೇಂದ್ರ, ಸಾಧನ ಸಂಗೀತ ವಿದ್ಯಾಲಯದ ವಿದುಷಿ ಸುಚಿತ್ರಾ ಹೊಳ್ಳ, ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಯ ವಿದ್ವಾನ್ ದೀಪಕ್‌ಕುಮಾರ್ ಉಪಸ್ಥಿತರಿದ್ದರು.