ಸವಣೂರು ; ವಿದ್ಯಾರಶ್ಮಿಯಲ್ಲಿ ಕೊನ್ವೋಕೇಶನ್-ಚಿಣ್ಣರ ಹಬ್ಬ -2020

ಸವಣೂರು : ಇಲ್ಲಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ೨೦೧೯-೨೦ನೇ ಸಾಲಿನ ಯು.ಕೆ.ಜಿ. ತರಗತಿಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುವ ಕೊನ್ವೋಕೇಶನ್ ಮತ್ತು ಚಿಣ್ಣರ ಹಬ್ಬ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕಸ್ತೂರಿಕಲಾ ಎಸ್. ರೈಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿಕಟಪೂರ್ವ ಪ್ರಾಂಶುಪಾಲೆ ಮಿಥಾಲಿ ಪಿ. ರೈ ಮಾತನಾಡಿ ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆಯಿದೆ. ಮನೆಯಲ್ಲಿ ಪಾಲಕರು ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಶಾಲೆಯಲ್ಲಿ ಶಿಕ್ಷಕರು ಅದಕ್ಕೆ ಸೂಕ್ತ ಬೆಂಬಲ ನೀಡುತ್ತಾರೆ ಎಂದರು.


Ad Widget

Ad Widget

Ad Widget

Ad Widget

Ad Widget

Ad Widget

ಅಧ್ಯಕ್ಷತೆ ವಹಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಈಗಿನ ಕಾಲದ ಅಗತ್ಯಕ್ಕೆ ತಕ್ಕಂತೆ ವಿದ್ಯಾರಶ್ಮಿಯಲ್ಲಿ ಆಧುನಿಕ ವ್ಯವಸ್ಥೆಗಳೊಂದಿಗೆ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಪ್ರಾಂಶುಪಾಲ ಪ್ರಾಂಶುಪಾಲ ಸೀತಾರಾಮ ಕೇವಳ ವಿವಿಧ ಪ್ರಕಟಣೆಗಳನ್ನು ನೀಡಿದರು. ಪಣೆಮಜಲು, ಮಾಂತೂರು, ಪೆರಿಯಡ್ಕ, ಸವಣೂರು ಮತ್ತು ಆರೆಲ್ತಡಿ ಅಂಗನವಾಡಿಗಳ ಪುಟಾಣಿಗಳು, ಅವರ ಹೆತ್ತವರು, ಅಲ್ಲಿನ ಶಿಕ್ಷಕಿಯರು ಭಾಗವಹಿಸಿದ್ದರು.

ಉದ್ಘಾಟನ ಕಾರ್ಯಕ್ರಮದ ಬಳಿಕ ಎಲ್ಲ ಅಂಗನವಾಡಿಗಳ ಮಕ್ಕಳಿಗೆ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಲಾಯಿತು. ಆಗಮಿಸಿದ ಪೋಷಕರಿಗೂ ವಿವಿಧ ಸ್ವಾರಸ್ಯಕರ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಧ್ಯಾಹ್ನದ ಬಳಿಕ ಸಿನಿಮಾ ಪ್ರದರ್ಶನ ಮತ್ತು ಕ್ಲೇ ಮೋಡೆಲಿಂಗ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು. ಆಡಳಿತಾಽಕಾರಿ ಅಶ್ವಿನ್ ಎಲ್. ಶೆಟ್ಟಿ, ಎನ್. ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ವಿಜೇತ ಪೋಷಕರಿಗೆ ಬಹುಮಾನ ವಿತರಿಸಲಾಯಿತು. ಧನಂಜಯ ಮರ್ಕಂಜ ಅವರ ನೇತೃತ್ವದಲ್ಲಿ ಕ್ಲೇ ಮೋಡೆಲಿಂಗ್ ನಡೆಯಿತು. ವೈಷ್ಣವಿ, ಮನ್ವಿತ್, ಶ್ವೇಪಾಲಿ, ಫಾತಿಮತ್ ಹನಾ, ಕೃಪಹರಿ ಎಂ. ರೈ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು.

error: Content is protected !!
Scroll to Top
%d bloggers like this: