ಗ್ರಾಮಸ್ಥರ ಗೈರು- ಕಾಣಿಯೂರು ಗ್ರಾಮ ಸಭೆ ರದ್ದು

ಕಾಣಿಯೂರು: ಕಾಣಿಯೂರು ಗ್ರಾಮ ಸಭೆಯನ್ನು ಗ್ರಾಮಸ್ಥರ ಗೈರಿನ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ. ಕಾಣಿಯೂರು ಗ್ರಾ.ಪಂ ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮಗಳ ಸಾಲಿನ 2019-20ನೇ ಸಾಲಿನ ದ್ವಿತೀಯ ಸುತ್ತಿನ ಕಾಣಿಯೂರು ಗ್ರಾಮ ಸಭೆಯು ಮಾ 2ರಂದು ಕಾಣಿಯೂರು ಸ.ಹಿ.ಪ್ರಾ.ಶಾಲೆಯಲ್ಲಿ ಗ್ರಾ.ಪಂ, ಅಧ್ಯಕ್ಷೆ ಮಾಧವಿ ಕೋಡಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಾಗಿತ್ತು. ಜನಪ್ರತಿನಿಧಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಚರ್ಚಾನಿಯಂತ್ರಣಾಧಿಕಾರಿಗಳು, ಇಲಾಖಾಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿತ್ತಾದರೂ ಗ್ರಾಮಸ್ಥರ ಗೈರಿನಿಂದ ಗ್ರಾಮ ಸಭೆಯನ್ನು ರದ್ದುಗೊಳಿಸಿ, ಮುಂದೂಡಲಾಗಿದೆ ಎಂದು ವರದಿಯಾಗಿದೆ.

7 ಮಂದಿ ಭಾಗಿ: ಕಾಣಿಯೂರು ಗ್ರಾ.ಪಂ ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಒಟ್ಟು ಮೂರು ಗ್ರಾಮಗಳಲ್ಲಿ ಕೇವಲ 7 ಮಂದಿ ಗ್ರಾಮ ಸಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: