ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ ಕಡಿತಗೊಳಿಸಿ ಒಂದು ಕೆಜಿ ತೊಗರಿಬೇಳೆ, ಒಂದು ಕೆಜಿ ಸಕ್ಕರೆ, 1 ಕೆಜಿ ಉಪ್ಪು, ಒಂದು ಲೀಟರ್ ಎಣ್ಣೆ ರಿಯಾಯಿತಿ ದರದಲ್ಲಿ ನೀಡಲು ಯೋಜನೆ ಸಿದ್ಧಪಡಿಸಲಾಗಿದೆ .

ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಶೇಕಡ 20 ಕ್ಕೂ ಹೆಚ್ಚಿನ ಪ್ರಮಾಣದ ಅಕ್ಕಿ ದುರುಪಯೋಗವಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಕ್ಕಿ ಪ್ರಮಾಣ ಕಡಿತಗೊಳಿಸಿ ರಿಯಾಯಿತಿ ದರದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ ನೀಡಲು ಯೋಜಿಸಲಾಗಿದೆ ಎಂಬ ಮಾಹಿತಿ ದೊರಕಿದೆ.

Leave A Reply

Your email address will not be published.