ರಾಜ್ಯದಲ್ಲಿ ಮೊದಲ ಕೋರೋನ ವೈರಸ್ ಸೋಂಕಿತನ ಪತ್ತೆ : 9 ನೇ ತರಗತಿವರೆಗಿನ ಪರೀಕ್ಷಾ ವೇಳಾಪಟ್ಟಿ ಬದಲು

Share the Article

ಇಂದು ಬೆಂಗಳೂರಿನಲ್ಲಿ, ಈ ಹಿಂದೆ ಅಮೇರಿಕಾಕ್ಕೆ ಹೋಗಿ ಬಂದಿದ್ದ ವ್ಯಕ್ತಿಯಲ್ಲಿ ಕೊರೋನ ವೈರಸ್ ಸೋಂಕು ತಗುಲಿದ ವಿಷಯ ಬಹಿರಂಗವಾಗಿದೆ. ಕರ್ನಾಟಕದ ಆರೋಗ್ಯ ಮಂತ್ರಿಗಳು ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಸರಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ ನೇಡ್ಡಾಯವಾಗಿ ಮುಗಿಸಬೇಕು. ಆ ಬಳಿಕ ಮಕ್ಕಳಿಗೆ ರಜೆ ಕೊಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ಕೊರೋನ ವೈರಸ್ ಹಬ್ಬುವ ಭೀತಿಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಡಿಡಿಪಿಐಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ಆಯುಕ್ತರು 1ರಿಂದ 9 ನೆ ತರಗತಿಯ ಪರೀಕ್ಷೆಗಳನ್ನು ಕಾಲಮಿತಿಯೊಳಗೆ ನಡೆಸಲು ನಿರ್ದೇಶನ ನೀಡಿದ್ದಾರೆ. ಆದರೆ ಎಸೆಸ್ಸೆಲ್ಸಿ ಪರೀಕ್ಷೆ ಮಾತ್ರ ನಿಗದಿಯಂತೆ ನಿಗದಿತ ದಿನಾಂಕದಲ್ಲೇ ನಡೆಸಲು ಸೂಚನೆ ಸಿಕ್ಕಿದೆ.

ಉಳಿದಂತೆ ಶಾಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆಯ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಮತ್ತು ಯಾವುದೇ ವಿದ್ಯಾರ್ಥಿಗಳಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮು ಇತ್ಯಾದಿ ಸಮಸ್ಯೆ ಕಂಡು ಬಂದಲ್ಲಿ ಅಂತಹವರಿಗೆ ತಕ್ಷಣ ಆರೋಗ್ಯ ಇಲಾಖೆಯು ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕಡ್ಡಾಯವಾಗಿ ಅವರಿಗೆ ರಜೆ ನೀಡಬೇಕು ಎಂದು ನಿರ್ದೇಶಿಸಿದ್ದಾರೆ.

ಸುರಕ್ಷತೆಯ ದೃಷ್ಟಿಯಿಂದ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಬಯಸಿದ್ದಲ್ಲಿ ಅದಕ್ಕೆ ಅನುಮತಿ ನೀಡಲು ಕೂಡ ಆಯುಕ್ತರು ತಿಳಿಸಿದ್ದಾರೆ.

Leave A Reply

Your email address will not be published.