Breaking | ದಕ್ಷಿಣಕನ್ನಡದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳು ಬಂದ್

ದಕ್ಷಿಣ ಕನ್ನಡದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳು ಬಂದ್ ಮಾಡಲಾಗುತ್ತದೆ. ಸಾರ್ವಜನಿಕರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿ ಎಂಜಿ ರೂಪಾ ಅವರು ತಿಳಿಸಿದ್ದಾರೆ.

 

ಇಂದು ಮಂಗಳವಾರ ಆರೋಗ್ಯ ಸಚಿವ ಶ್ರೀರಾಮುಲು ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆದಿತ್ತು. ಆ ಸಭೆಯಲ್ಲಿ ಮೂಡಿಬಂದ ನಿರ್ಧಾರವನ್ನು ಇಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಿಸಿದರು.

ಆದ್ದರಿಂದ ಇವತ್ತಿನಿಂದ ದಕ್ಷಿಣ ಕನ್ನಡದ ಎಲ್ಲಾ ದೇವಸ್ಥಾನಗಳು ಜನಜಂಗುಳಿ ಇರುವ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಸೇವೆಗಳು ಲಭ್ಯವಿರುವುದಿಲ್ಲ. ಆದರೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಷ್ಟೇ ಅಲ್ಲದೆ ಜನಜಂಗುಳಿ ಸೇರುವ ಬೀಚು ನಿರ್ಬಂಧಕ್ಕೆ ಕೂಡ ಚಿಂತನೆ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಕೋರೋಣ ವೈರಸ್ ಪತ್ತೆ ಹಚ್ಚಲು ಅಗತ್ಯವಿರುವ ಲ್ಯಾಬ್ ಮಂಗಳೂರಿನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಅವರು ಹೇಳಿದರು.

ಸಭೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ಮಾಜಿ ಸಚಿವ ಯುಟಿ ಖಾದರ್, ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ್ ಸಿಇಓ ಸೆಲ್ವಮಣಿ ಅವರು ಹಾಜರಿದ್ದರು.

Leave A Reply

Your email address will not be published.