ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ಧತಾ ಸಭೆಬೆಳಂದೂರು :ಎ ೩ರಿಂದ ಎ ೮ರವರೆಗೆ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಇದರ ಪೂರ್ವ ಸಿದ್ದತೆ ಕುರಿತು ಸಮಾಲೋಚನಾ ಸಭೆಯು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಮಾತನಾಡಿ, ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಅನ್ನದಾನವು ಬಹಳ ಪ್ರಾಮುಖ್ಯತೆಯಾಗಿದ್ದು, ಎಲ್ಲರ ಸಹಕಾರದಿಂದ ವ್ಯವಸ್ಥಿತ ರೀತಿಯಲ್ಲಿ ಅನ್ನದಾನ ನಡೆಯಬೇಕಾಗಿದೆ. ಪುತ್ತೂರು, ಸುಳ್ಯ, ಹಾಗೂ ಕಡಬ ತಾಲೂಕಿನ ಎಲ್ಲಾ ದೇವಸ್ಥಾನ, ದೈವಸ್ಥಾನಗಳಿಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ತಲುಪಿಸುವ ಕೆಲಸವಾಗಬೇಕು. 
ಬ್ರಹ್ಮಕಲಶೋತ್ಸವದಲ್ಲಿ  ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶಕ್ತಿಮೀರಿ ಪಾಲ್ಗೊಂಡು ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುವ ನಿಟ್ಟಿನಲ್ಲಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಮುಂದಾಗಬೇಕು ಎಂದರು. 
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಬ್ರಹ್ಮಕಲಶೋತ್ಸವದ ಸಿದ್ದತೆ ಹಾಗೂ ಕಾರ್ಯ ಯೋಜನೆ ಕುರಿತು ವಿವರಿಸಿದರು. ಆಭಿವೃದ್ದಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಬ್ರಹ್ಮಕಲಶೋತ್ಸವದ ದಿನ ಹತ್ತಿರ ಬರುತ್ತಿದ್ದು, ಪ್ರತಿಯೊಂದು ಮನೆಗಳಿಗೂ  ಆಮಂತ್ರಣ ತಲುಪಬೇಕು. ಜೊತೆಗೆ ದೇವಸ್ಥಾನದ ಶ್ರಮದಾನದ ಮೂಲಕ ಎಲ್ಲಾ ಕೆಲಸ ಕಾರ್ಯಗಳಲ್ಲಿ ಊರಿನ ಜನತೆ ಕೈಜೋಡಿಸಬೇಕು ಎಂದರು.
ಅರ್ಚಕ ರಮಾನಂದ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಽಕಾರಿ ಯಶೋಧರ ಕೆಡೆಂಜಿಕಟ್ಟ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
 ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ವೆಂಕಟೇಶ್ ಭಟ್ ಕೊಯಕ್ಕುಡೆ ವಂದಿಸಿದರು.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: