ಇಂದ್ರ ಪ್ರಸ್ಥವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ NTSE ತರಬೇತಿ ಕಾರ್ಯಾಗಾರ

ಉಪ್ಪಿನಂಗಡಿ : ಇಲ್ಲಿನ ಇಂದ್ರಪಸ್ಥ ವಿದ್ಯಾಲಯವು ತನ್ನ ಸಂಸ್ಥೆಯ ವಿದ್ಯಾರ್ಥಿಗಳನ್ನು NTSE (( ನ್ಯಾಷನಲ್ ಟ್ಯಾಲೆಂಟ್ ಸರ್ಚ್ ಎಕ್ಸಾಮಿನೇಷನ್ ) ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಗೊಳಿಸುವ ಸದುದ್ದೇಶವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಇಲ್ಲಿನ ಶಿಕ್ಷಕರಿಗಾಗಿ ಈ ಕ್ಷೇತ್ರದಲ್ಲಿ ಪರಿಣಿತರಾದ ರಾಮಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಭಟ್‍ ಇವರು ತರಬೇತಿ ಕಾರ್ಯಾಗಾರವನ್ನು ಮಾರ್ಚ್ 18 ರಂದು ವಿದ್ಯಾಲಯದಲ್ಲಿ ನಡೆಸಿಕೊಟ್ಟರು.

ಸಂಸ್ಥೆಯ ಶಿಕ್ಷಕರು ಈ ಕಾರ್ಯಾಗಾರದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು.

ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಈ ವಿಷಯದ ಕುರಿತಾಗಿ ಹೆಚ್ಚಿನ ತರಬೇತಿಯನ್ನು ನೀಡಿ ಪರೀಕ್ಷೆಯನ್ನುಎದುರಿಸುವಲ್ಲಿ ಅವರನ್ನು ಮಾನಸಿಕವಾಗಿ ತಯಾರುಗೊಳಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.

ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಜೋಸ್ ಎಂ. ಜೆ. ಯವರು ಸ್ವಾಗತಿಸಿ ಉಪಪ್ರಾಂಶುಪಾಲರಾದ ಶ್ರೀಮತಿ ವೀಣಾ ಡಿ. ವಂದಿಸಿದರು.

Leave A Reply

Your email address will not be published.