ಶಾಂತಿಮೊಗರು ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆ
ಬೆಳಂದೂರು : ಎಪ್ರಿಲ್‌ನಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ರೂ.೫ ಲಕ್ಷ ದೇಣಿಗೆಯನ್ನು ಯೋಜನೆಯ ಸಮುದಾಯ ಆಭಿವೃದ್ದಿ ವಿಭಾಗದ ನಿರ್ದೇಶಕರಾದ ಶ್ರೀಹರಿ ಅವರು ವಿತರಿಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ,ಆಡಳಿ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ,ಅನುವಂಶೀಯ ಮೊಕ್ತೇಸರರಾದ ರಾಜದೀಪಕ್ ಜೈನ್ ಕುದ್ಮಾರು,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ವೆಂಕಟೇಶ್ ಭಟ್ ಕೊಯಕ್ಕುಡೆ,ಉಪಾಧ್ಯಕ್ಷ ಚಂದ್ರಶೇಖರ ಬರೆಪ್ಪಾಡಿ,ಜತೆ ಕಾರ್ಯದರ್ಶಿ ಭರತ್ ಕುಮಾರ್ ನಡುಮನೆ, ಅರ್ಚಕ ರಮಾನಂದ ಭಟ್ ತೋಟಂತಿಲ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕಿ ಅಶ್ವಿನಿ ಎಂ.ಜಿ,ಯೋಜನೆಯ ಒಕ್ಕೂಟದ ಪುಷ್ಪಲತಾ ಕುದ್ಮಾರು,ಜನಾರ್ದನ ಗೌಡ ಕುದ್ಮಾರು ಹಾಗೂ ಪದಾಽಕಾರಿಗಳು ,ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳ ಪದಾಽಕಾರಿಗಳು ಉಪಸ್ಥಿತರಿದ್ದರು.