ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ | ಗ್ಯಾಸ್ ಟ್ಯಾಂಕರ್ ಪಲ್ಟಿ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತಗೊಂಡಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬರುತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು ಆತನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ . ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿದ್ದು , ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿದ್ದು .ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸದ್ಯ ಟ್ಯಾಂಕರ್ ಅನ್ನು ತೆರವು ಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Leave A Reply

Your email address will not be published.