ಕರ್ನಾಟಕದಲ್ಲಿ ಕೊರೊನಾ ಪಾಸಿಟಿವ್ ಮತ್ತೊಂದು ದೃಢ | ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವ್ಯಕ್ತಿ

ಕರ್ನಾಟಕದಲ್ಲಿ ಮಾ.21ರಂದು‌ಕೊರೊನಾ ಪಾಸಿಟವ್ ಪತ್ತೆಯಾಗಿದೆ.

ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವ್ಯಕ್ತಿಯೋರ್ವರು ಮುಸ್ಲಿಂ ರ ಪ್ರಸಿದ್ಧ ಯಾತ್ರಾ ಸ್ಥಳ ಮೆಕ್ಕಾ ಗೆ ಹೋಗಿದ್ದು,ಅವರು ಊರಿಗೆ ವಾಪಾಸಾಗಿದ್ದರು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅವರ ವೈದ್ಯಕೀಯ ವರದಿಗಾಗಿ ಕಾಯಲಾಗಿತ್ತು.

ಇಂದು ಆ ವ್ಯಕ್ತಿಗೆ ಕೊರೊನಾ Covid 19 ಪಾಸಿಟಿವ್ ಆಗಿದೆ ಎಂದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಕೊರೊನಾ ವೈರಸ್ ಬಾಧಿತ ವ್ಯಕ್ತಿಯನ್ನು ಪ್ರತ್ಯೇಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಈ ಕುರಿತು ಕರ್ನಾಟಕದ ಆರೋಗ್ಯ ಸಚಿವ ಬಿ.ಶ್ರೀ ರಾಮುಲು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

Leave A Reply

Your email address will not be published.