ಲಾಕ್ ಡೌನ್ ನಿಯಮಾವಳಿಗಳನ್ನು ಗಂಭೀರವಾಗಿ ಪಾಲಿಸಿ – ಮೋದಿ ಮನವಿ
ನವದೆಹಲಿ : ಕೋವಿಡ್ 19 ವೈರಸ್ ಸೋಂಕು ತಡೆಯಲು ದೇಶದ ಹಲವು ರಾಜ್ಯಗಳ 75 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಿದ್ದು, ಆದರೆ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇನ್ನಾದರೂ ಜನರು ಹಾಗೂ ರಾಜ್ಯ ಸರಕಾರಗಳು ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಬೇಕು, ನಿಮ್ಮನ್ನು ನೀವು ರಕ್ಷಣೆ ಮಾಡಿ, ನಿಮ್ಮ ಕುಟುಂಬವನ್ನು ರಕ್ಷಣೆ ಮಾಡಿ , ಲಾಕ್ ಡೌನ್ ನ ನಿಯಮಾವಳಿಗಳನ್ನು ಗಂಭೀರವಾಗಿ ಪಾಲಿಸಿ ಎಂದು ಮೋದಿ ತನ್ನ ಟ್ವಿಟರ್ ಖಾತೆ ಮೂಲಕ ತಿಳಿಸಿದ್ದಾರೆ.