ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ | ಪರಿಶೀಲನೆ
ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿತ್ತು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದರು. ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡ ಸಂಸದರು ತಕ್ಷಣ ದೆಹಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ತಡಮಾಡದೇ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿಗೆ ತಲುಪಿದ ಕೂಡಲೇ ನೇರವಾಗಿ ವೆನಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು. ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು.
ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದರು.
ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ಈ ಕ್ಷಿಪ್ತ ಕಾರ್ಯ ಚಟುವಟಿಕೆಯಿಂದ ಜನರಲ್ಲಿ ಇದ್ದ ಗೊಂದಲ ನಿವಾರಣೆಯಾಗಿದೆ.
ಜನರು ಊಹಾಪೋಹಗಳನ್ನು ನಂಬಂದೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ. ಸಂಸದರ ವೆನ‌್ಲಾಕ್ ಭೇಟಿಯಿಂದ ಜನರಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಂತೆ ಆಗಿದೆ.
ಸರ್ ಸುದ್ದಿಯ ಆಯಾಮಗಳನ್ನು ಪರಿಶೀಲಿಸಿ ವರದಿ ಮಾಡಬೇಕು
1. ನಿನ್ನೆಯವರೆಗೆ ಶಂಕಿತರು ಮತ್ತು ಸೋಂಕಿತ ವ್ಯಕ್ತಿ ಯಾವ ವಾರ್ಡ್ ಗಳಲ್ಲಿ ಇದ್ರೂ
2.ಶಂಕಿತರು ಆಸ್ಪತ್ರೆಯಲ್ಲಿ ಓಡಾಡುವಾಗ ಇತರ ರೋಗಿಗಳ ಆಸ್ಪತ್ರೆ ಸಿಬ್ಬಂದಿ ಗಳು ಸಂಪರ್ಕಕ್ಕೆ ಬಂದಿಲ್ವ
3. ಶಂಕಿತರನ್ನು ಪರಿಶೀಲನೆ ನಡೆಸಿದ ಉಪಕರಣಗಳಿಂದ ಇತರ ರೋಗಿಗಳನ್ನು ಕೂಡ ಪರಿಶೀಲನೆ ಮಾಡಿಲ್ಲವೆ