ಲಾಕ್ ಡೌನ್ ನೆಪದಲ್ಲಿ ವೇತನ ಕಡಿತ ಮಾಡದಿರಿ – ಖಾಸಗಿ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ | 2 ರೂಪಾಯಿಗೆ ಗೋಧಿ, 3 ರೂಪಾಯಿಗೆ ಅಕ್ಕಿ | ವಿಶೇಷ ಪಡಿತರ ಪ್ಯಾಕೆಜ್

ನವದೆಹಲಿ : ಕಾಳ ಸಂತೆಯಲ್ಲಿ ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದೇ ಆದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.

ಕೊರೊನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ 80 ಕೋಟಿ ರೂಪಾಯಿಗಳ ವಿಶೇಷ ಪಡಿತರ ಯೋಜನೆಗೆ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ನೆಪ ಮಾಡಿ ಯಾವುದೇ ನೌಕರರ ಸಂಬಳವನ್ನು ಕಡಿತಗೊಳಿಸಬಾರದು ಎಂದು ಖಡಕ್ ಸೂಚನೆಯನ್ನು ದೇಶದ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ನೀಡಿದೆ.

ಈ ಕುರಿತಂತೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕೇಂದ್ರ ಸರ್ಕಾರದಿಂದ 80 ಕೋಟಿ ಭಾರತೀಯರಿಗೆ ಹೊಸ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಜಿಲ್ಲೆಗೊಂದರಂತೆ ಕೊರೊನಾ ಕುರಿತ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಿದರು. ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಊಟ ನೀಡಲು ನಿರ್ಧರಿಸಲಾಗಿದೆ.

ಕಾಳಸಂತೆಯಲ್ಲಿ ದಿನಸಿ ವಸ್ತುಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಗುತ್ತಿಗೆ ಕಾರ್ಮಿಕರಿಗೆ ಕಡ್ಡಾಯವಾಗಿ ಸಂಭಳ ನೀಡಲಾಗುತ್ತಿದೆ. ಯಾರ ಸಂಬಳವನ್ನು ಕಡಿತಗೊಳಿಸದಂತೆ ಸೂಚಿಸಲಾಗುತ್ತಿದೆ.

2 ರೂಪಾಯಿಗೆ ಕೆಜಿ ಗೋಧಿ, 3 ರೂಪಾಯಿಗೆ ಕೆಜಿ ಅಕ್ಕಿ ವಿತರಿಸುವ ಪಡಿತರ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದರು.

1340 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಣೆ ಮಾಡಿದ ಅವರು, ಪ್ರಾದೇಶಕ ಗ್ರಾಮೀಣ ಬ್ಯಾಂಕ್ ಗಳಿಗೆ ಫಂಡ್ ನೀಡಲಾಗುತ್ತದೆ.

ಭಾರತೀಯರ ಪಡಿತರ ಯೋಜನೆಗೆ 1,340 ಕೋಟಿ ಅನುದಾನ ಘೋಷಣೆ ಮಾಡಿದರು. ಯಾವುದೇ ಕಂಪನಿ, ಸಂಸ್ಥೆ ನೌಕರರ ವೇತನವನ್ನು ಲಾಕ್ ಡೌನ್ ಹೆಸರಿನಲ್ಲಿ ಕಡಿತಗೊಳಿಸಿದ್ದೇ ಆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Leave A Reply

Your email address will not be published.