ಮಂಗಳೂರು | ಬಡ ಕೂಲಿ ಕಾರ್ಮಿಕ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ ವತಿಯಿಂದ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಅನ್ನ ಆಹಾರದ ವ್ಯವಸ್ಥೆ

ದೇಶಾದ್ಯಂತ ಹಬ್ಬಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರತ ಸರಕಾರ ಘೋಷಿಸಿರುವ ಲಾಕ್ ಡೌನ್ ಆದೇಶದದಿಂದ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿನ ಬಡ ಕೂಲಿ ಕಾರ್ಮಿಕರಿಗೆ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ (ರಿ) ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ರಾಮ್ ಸೇನಾ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ನೂರಾರು ಮಂದಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಕಲ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಮ್ ಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು,ರಾಜ್ಯ ಕಾರ್ಯದರ್ಶಿ ಮಂಜುನಾಥ ಕುಂದರ್ ಸೇರಿದಂತೆ ಪ್ರಮುಖ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave A Reply

Your email address will not be published.