ಕೊರೊನಾ ವಿರುದ್ಧ ಕಾರ್ಯಾಚರಣೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ತಿಂಗಳ ವೇತನ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಶಾಸಕರ ವೇತನದ ಮೂರು ತಿಂಗಳ ಸಂಬಳವನ್ನು ಕೋರೋನಾ ವೈರಸ್ ವಿರುದ್ದದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಈ ಸಂಬಂಧ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪತ್ರ ಬರೆದಿದ್ದು ಕೋರೋಣಾ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ ತುಂಬಾ ನಷ್ಟವಾಗಿದೆ. ಈ ಸಂದರ್ಭದಲ್ಲಿ ನಾವು ನೈತಿಕವಾಗಿ ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಸಹಾಯಕ್ಕೆ ಸಿದ್ದವಿದ್ದೇವೆ ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಕೈಗೊಂಡ 21 ದಿನಗಳ ಲಾಕ್ ಡೌನ್ ನ ದಿಟ್ಟ ನಿರ್ಧಾರಕ್ಕೆ ಪೂರ್ತಿ ಬೆಂಬಲವಿದೆ ಎಂದಿದ್ದಾರೆ.

Leave A Reply

Your email address will not be published.