ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಬಂದ್

ಮಂಗಳೂರು : ಕೊರೊನಾ ಕರಾಳ ಛಾಯೆ ದಿನದಿಂದ ದಿನಕ್ಕೆ ಹಬ್ಬುತ್ತಿದ್ದು ಈ‌ ನಿಟ್ಟಿನಲ್ಲಿ ಮಾ.28 ರಂದು ದ.ಕ ಜಿಲ್ಲೆಯನ್ನು ಬೆಳಿಗ್ಗೆಯಿಂದ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂಬ ಮಾಹಿತಿ ದೊರಕಿದೆ.

ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಾವೆಲ್ಲ ಒಂದೇ ಒಂದು ನರಪಿಳ್ಳೆಯೂ ರಸ್ತೆಗೆ ಬಾರದಂತೆ ಬಂದ್ ಯಶಸ್ವಿ ಮಾಡಬೇಕು. ಬುದ್ದಿವಂತರ ಜಿಲ್ಲೆ ಎಲ್ಲಾ ವಿಷಯಗಳಲ್ಲೂ ಮುಂಚೂಣಿಯಲ್ಲಿ ಇರಬೇಕು. ಜಿಲ್ಲೆಯ ಜನತೆಯ ಭವಿಷ್ಯದ ಪ್ರಶ್ನೆಯಾಗಿದ್ದು ಜನತೆ ಅರ್ಥೈಸಿಕೊಳ್ಳಬೇಕಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂದಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಿವೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು.

ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಆ 21 ದಿನ ಪೂರೈಸದೆ ಹೋದರೆ 35 ಕೋಟಿ ಮರಣ !!

Leave A Reply

Your email address will not be published.