ಅಗತ್ಯ ವಸ್ತುಗಳನ್ನು ಅನಗತ್ಯವಾಗಿ ಸಂಗ್ರಹ ಬೇಡ | ಕಡಬ ತಾ.ತುರ್ತು ನಿರ್ವಹಣಾ ಸಭೆಯಲ್ಲಿ ಸೂಚನೆ
ಕಡಬ : ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರ ನೇತೃತ್ವದಲ್ಲಿ ಕಡಬ ತಾಲೂಕಿಗೆ ಸಂಬಂಧಿಸಿದಂತೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅಗತ್ಯ ಸೇವೆಗಳಿಗೆ ಪೂರಕವಾಗಿ ಅಧಿಕಾರಿಗಳ ಸಭೆ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಅಗತ್ಯ ವಸ್ತುಗಳನ್ನು ಅನಗತ್ಯವಾಗಿ ಸಂಗ್ರಹ ಬೇಡ ಎಂಬ ಒಮ್ಮತದ ಸೂಚನೆ ನೀಡಲಾಯಿತು.
ಆರೋಗ್ಯ ಇಲಾಖೆಯ ಸಿಬಂದಿಗಳಿಗೆ,ಕರ್ಫ್ಯೂ ಸಂಬಂಧಿಸಿದಂತೆ ಕಾರ್ಯ ನಿರ್ವಹಣೆ ಗೆ ತಡೆ ಉಂಟುಮಾಡುವವರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಎಸಿ ಡಾ.ಯತೀಶ್ ಉಳ್ಳಾಲ್ ಎಚ್ಚರಿಕೆ ನೀಡಿದರು.
ಶಾಸಕ ಎಸ್.ಅಂಗಾರ ಮಾತನಾಡಿ, ತುರ್ತು ಸಂದರ್ಭದಲ್ಲಿ ಇಲಾಖಾದಿಕಾರಿಗಳನ್ನು ಸಂಪರ್ಕಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ, ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೊಡ್ರಿಗಸ್, ಡಿ ವೈ ಎಸ್ ಪಿ ದಿನಕರ್ ಶೆಟ್ಟಿ ಭಾಗವಹಿಸಿದ್ದರು.
ಸಭೆಯಲ್ಲಿ ಸಾರ್ವಜನಿಕರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ಗ್ರಾ.ಪಂ.ಅಧ್ಯಕ್ಷರು,ಉಪಾಧ್ಯಕ್ಷ, ಸದಸ್ಯರು ,ಸಹಕಾರಿ ಸಂಘಗಳ ಪ್ರತಿನಿಧಿಗಳು,ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.