Breaking | ದೆಹಲಿಯ ಮರ್ಕಾಜ್ ನಿಜಾಮುದ್ದಿನ್ ಗೆ ಕರ್ನಾಟಕದಿಂದ ಹೋದ ಎಲ್ಲಾ 342 ಜನರ ಪತ್ತೆ
ಬೆಂಗಳೂರು : ದೆಹಲಿಯ ನಿಜಾಮುದ್ದೀನ್ ಜಮಾತ್ ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ 2100 ಜನರಲ್ಲಿ ಹಲವರಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಅಲ್ಲಿ ಪಾಲ್ಗೊಂಡ ಇತರರ ಮೇಲೂ ಕಣ್ಣಿಡಲಾಗಿದೆ.
ಮರ್ಕಾಜ್ ನಿಜಾಮುದ್ದೀನ್ ಮಸೀದಿಯಲ್ಲಿ ಇದುವರೆಗೆ ಕರ್ನಾಟಕದ 342 ಜನರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಈಗ ಅವರಲ್ಲಿ ಎಲ್ಲರನ್ನು ಪತ್ತೆ ಹಚ್ಚಲಾಗಿದೆ ಎಂದು ಕರ್ನಾಟಕದ ಗೃಹಮಂತ್ರಿ ಎಸ್ಆರ್ ಬೊಮ್ಮಾಯಿ ಅವರು ಹೇಳಿಕೊಂಡಿದ್ದಾರೆ.
ಮಸೀದಿಯ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಕರ್ನಾಟಕ ಮೂಲದ 342 ಜನರು ಭಾಗವಹಿಸಿದ್ದರು. ಅದರಲ್ಲಿ ಎಲ್ಲರನ್ನೂ ಪತ್ತೆ ಹಚ್ಚಲಾಗಿದೆ. ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತಿದೆ. ಇದರಲ್ಲಿ ಕೆಲವರು ಕೆಲವರನ್ನು ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗುತ್ತದೆ. ಇದರಲ್ಲಿ 12 ಜನರ ವರದಿ ನೆಗೆಟಿವ್ ಬಂದಿದೆ ಎಂದು ಸಚಿವರು ಹೇಳಿದರು.
ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.