ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳು ರೆಡ್ ಝೋನ್ ಗೆ !

ಬೆಂಗಳೂರು, ಎ.1 : ಕೊರೋನಾ ವೈರಸ್ ನಿಂದ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ರೆಡ್ ಝೋನ್ ಎಂದು ಕರ್ನಾಟಕ ಸರಕಾರ ಇದೀಗ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಮೈಸೂರು, ಉತ್ತರ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಈಗ ರೆಡ್ ಝೋನ್ ಗೆ ಬರಲಿವೆ. ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ಕ್ರಮಗಳಿಗೆ ಮುಂದಾಗಿದೆ. ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗೂ ಜಿಲ್ಲೆಗಳ ಮೇಲೆ ಹೆಚ್ಚಿನ ನಿಗಾಗಳನ್ನು ಮತ್ತು ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಕ್ರಮಗಳೇನು?

  • ಮನೆ ಬಾಗಿಲಿಗೆ ತೆರಳಿ ಕೊರೋನಾ ಜಾಗೃತಿ ಮೂಡಿಸಿ, ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.
  • ಈ 4 ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿರುವ ಲಾಕ್’ಡೌನ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುತ್ತದೆ.

ಬೆಂಗಳೂರು ನಗರವನ್ನು ಈಗಾಗಲೇ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ‘ಕೊರೋನಾ ಹಾಟ್‌ ಸ್ಪಾಟ್’ ಎಂದು ಘೋಷಣೆ ಮಾಡಿದ್ದು, ಅದನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ.

Leave A Reply

Your email address will not be published.