ರಾಜ್ಯದ ಎಲ್ಲಾ 1 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಪಾಸ್ । ಸಿಬಿಎಸ್ಇ ವಿದ್ಯಾರ್ಥಿಗಳೂ ನಿರಾಳ

ಬೆಂಗಳೂರು : ಕಳೆದ ಹಲವು ದಿನಗಳಿಂದ ಇದ್ದ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ತೆರೆ ಎಳೆದಿದ್ದಾರೆ.


Ad Widget

Ad Widget

Ad Widget

Ad Widget
Ad Widget

Ad Widget

Ad Widget

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1 ರಿಂದ 9 ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದಿದ್ದಾರೆ. ಹಾಗೆಯೇ 11 ನೇ ತರಗತಿಗೆ ಕೂಡ ಈ ಬಾರಿ ಪರೀಕ್ಷೆ ಇಲ್ಲ. ಇವರೆಲ್ಲ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಅರ್ಹರಾಗುತ್ತಾರೆ.

ಆದರೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಲಾಕ್ ಡೌನ್ ಮುಗಿಯುತ್ತಿದ್ದಂತೆ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: