ಮಂಗಳೂರು- ಕಾಸರಗೋಡು ಗಡಿ ತೆರೆಯಲು ಕೇಂದ್ರ ಸರಕಾರಕ್ಕೆ ಕೇರಳ ಹೈಕೋರ್ಟ್ ಆದೇಶ
ಏಪ್ರಿಲ್ 2 : ಕೊರೋನಾ ವೈರಸ್ ಪ್ರಸಾರದ ಭೀತಿಯ ಹಿನ್ನಲೆಯಲ್ಲಿ ಮುಚ್ಚಲಾಗಿರುವ ಮಂಗಳೂರು-ಕಾಸರಗೋಡು ಗಡಿಯ ಹೆದ್ದಾರಿ ರಸ್ತೆಯನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಒಂದೊಮ್ಮೆ ಗಡಿಯನ್ನು ತೆರವುಗೊಳಿಸಿದರೆ ಕರ್ನಾಟಕಕ್ಕೆ ಕಾಡಿದ್ಯ ಸೋಂಕು ಹರಡುವ ಗಂಡಾಂತರ ? ಈಗಾಗಲೇ ಕೇರಳ ದೊಡ್ಡ ಪ್ರಮಾಣದಲ್ಲಿ ಸೋಂಕಿತ ರಾಜ್ಯ. ಅಲ್ಲದೆ, ದೇಶದ ಮೊತ್ತ ಮೊದಲ ಕೊರೋನಾ ಸೋಂಕು ಕಾಣಿಸಿಕೊಂಡ ರಾಜ್ಯ ಕೇರಳ.
ಕರ್ನಾಟಕದ ಆಸ್ಪತ್ರೆಗಳಲ್ಲಿ ಕೇರಳದ ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಗಡಿಯನ್ನು ತೆರೆಯುವಂತೆ ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಕರ್ನಾಟಕದ ಹಿತ ಮುಖ್ಯವಲ್ಲವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ?
ಇದೇ ವಿಚಾರವಾಗಿ ಇನ್ನು ಈ ಹಿಂದೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದ್ದು, ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ತೆರೆದಿಡಬೇಕು. ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ಶಾಸಕ ಶ್ರೀ ಹರೀಶ್ ಪೂಂಜಾ ಅವರು ಟ್ವೀಟ್ ಮಾಡಿದ್ದಾರೆ.
ಇದು ಕರ್ನಾಟಕದ ಒಗ್ಗಟ್ಟಾಗಿ ಇರಬೇಕಾಗಿರುವ ಸಂದರ್ಭ. ಕೇರಳದ ಜಿಹಾದಿ ಮತ್ತು ಕಮ್ಮುನಿಸ್ಟ್ ಜೋಡಿ ಗಡಿಯ ಮೂಲಕ ಕೊರೋನಾವನ್ನು ಕರ್ನಾಟಕಕ್ಕೆ ತರುತ್ತಿದ್ದಾರೆ. ಅದನ್ನು ನಾವು ನಿಲ್ಲಿಸಬೇಕು.
-ಬೆಳ್ತಂಗಡಿ ತಾಲೂಕಿನ ಶಾಸಕ ಶ್ರೀ ಹರೀಶ್ ಪೂಂಜಾ ಟ್ವೀಟ್
ನಮ್ಮ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮರು ಟ್ವೀಟ್
I
ವಿಚಾರಣೆ ನಡೆಸಿದ ನ್ಯಾಯಪೀಠವು, ಮಂಗಳೂರು ಮತ್ತು ಕೇರಳದ ಕಾಸರಗೋಡು ನಡುವೆ ಸಂಪರ್ಕಿಸುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದ್ದರಿಂದ ಈ ರಸ್ತೆಗಳನ್ನು ದಿಗ್ಬಂಧದಲ್ಲಿ ಇರದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಭಾರತದ ಪ್ರಜೆ ದೇಶದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಬಹುದು ಎಂದು ಸಂವಿಧಾನದ 19 (1) (ಡಿ) ವಿಧಿಯಲ್ಲಿ ತಿಳಿಸಲಾಗಿದೆ. ಕೇರಳದ ಹೈಕೋರ್ಟ್ ಅಸೋಸಿಯೇಷನ್ ನವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.
ಕರ್ನಾಟಕದ ಜನ ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ಗಾಡಿಯನ್ನು ತೆರೆಯದಂತೆ ಪ್ರತಿಭಟಿಸಬೇಕು, ನಮ್ಮ ಸಂಸದರನ್ನು ಜನಪ್ರತಿನಿಧಿಗಳನ್ನು ಒತ್ತಾಯಿಸಿ ಕೇಂದ್ರದ ಮೇಲೆ ಒತ್ತಡ ಹಾಕುವುದು ನಮ್ಮ ನಮ್ಮ ಜೀವ ಉಳಿಸಿಕೊಳ್ಳಲು ಅನಿವಾರ್ಯ. ಎಲ್ಲರೂ ಮೋದಿಗೆ, ಅಮಿತ್ ಷಾ ಗೆ #SaveKarnataka ಅಂತ ಟ್ವೀಟ್ ಮಾಡಿ. ನಮ್ಮ ಜನರ ರಕ್ಷಣೆ ನಮ್ಮ ಕೈಯಲ್ಲೇ. ನಾಳೆ ಹೆಚ್ಹು ಕಮ್ಮಿ ಆದರೆ ಕೇರಳದವರು ಸಹಾಯಕ್ಕೆ ಬರಲ್ಲ.
ಇಂತಹ ಆರೋಗ್ಯ ಸಂಬಂಧಿ ಸಂದರ್ಭಗಳಲ್ಲಿ ಗಡಿ ದಿಗ್ಬಂಧನ ಸರಿಯಲ್ಲ. ಗಡಿ ದಿಗ್ಬಂಧ ತೆರವು ಸ್ಥಗಿತವಾದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ತೊಂದರೆಯಾಗಬಹುದು. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕರ್ನಾಟಕವು ನಿರ್ಮಿಸಿರುವ ಗಡಿ ಪ್ರವೇಶ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಬೇಕೆಂದು ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ. ಜೊತೆಗೆ ಯಾವುದೇ ವಿಳಂಬವಿಲ್ಲದೆ ಎರಡು ರಾಜ್ಯಗಳ ನಡುವಿನ ಗಡಿಯುದ್ದಕ್ಕೂ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ನ್ಯಾಯಮೂರ್ತಿ ಎ.ಕೆ.ಜಯಶಂಕರ್ ನಂಬಿಯಾರ್ ಹಾಗೂ ಶಾಜಿ ಪಿ ಚಲಿ ಅವರಿದ್ದ ನ್ಯಾಯಪೀಠ ಸೂಚಿಸಿದೆ.
ಕೇರಳ ಹೈಕೋರ್ಟ್ಗೆ ಕರ್ನಾಟಕದ ಗಡಿಯ ವಿಷಯದಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಲು ಆಗುವುದಿಲ್ಲ ಎಂದು ಕರ್ನಾಟಕ ಸರಕಾರವು ವಾದಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ಕೇರಳ ಹೈಕೋರ್ಟು ” ಅಸಂವಿಧಾನಿಕ ಚಟುವಟಿಕೆಗಳು ನಡೆದಾಗ, ಕೋರ್ಟುಗಳು ತಮ್ಮ ಜ್ಯೂರಿಡಿಕ್ಷನ್ ಮೀರಿ ಕಾರ್ಯನಿರ್ವಹಿಸಲು ಶಕ್ತ ” ಎಂದಿದೆ.