ದ.ಕ ಲಾಕ್‌ಡೌನ್ ಉಲ್ಲಂಘನೆ | 284 ವಾಹನ ಸೀಝ್ !

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದ ಕಾರಣದಿಂದ 211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Leave A Reply

Your email address will not be published.