ಕ್ವಾರಂಟೈನ್ ನಲ್ಲಿರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಆಗಬೇಕು | ಶೋಭಾ ಕರಂದ್ಲಾಜೆ
ದೇಶದಲ್ಲಿ ಕೊರೊನಾ ಜಿಹಾದಿ ನಡೆಯುತ್ತಿದೆ. ಕ್ವಾರಂಟೈನ್ ನಲ್ಲಿರುವ ಜಿಹಾದಿಗಳು ವೈದ್ಯರನ್ನು ತಬ್ಬಿಕೊಳ್ಳುವ, ನರ್ಸ್ ಗಳಿಗೆ ಕೊರೊನಾ ಹರಡಿಸುವ ಬೆದರಿಕೆ ಹಾಕುತ್ತಿದ್ದಾರೆ. ಇಂತವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋಂ ಕ್ವಾರಂಟೈನ್ ನಲ್ಲಿರುವ ಕೆಲ ಕೊರೊನಾ ಸೋಂಕಿತರು ವೈದ್ಯರು, ನರ್ಸ್ ಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಉಗುಳುತ್ತಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್ನಲ್ಲಿ ಇರುವ ಜಿಹಾದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ಕಾಸರಗೋಡಿಗೆ ಚಿಕ್ಕಮಗಳೂರಿನಿಂದ ತರಕಾರಿ ರವಾನೆ ಮಾಡಿದ್ದೇವೆ. ಮಾನವೀಯತೆ ವಿಚಾರದಲ್ಲಿ ನಾವು ಹಿಂದೆ ಮುಂದೆ ನೋಡುವುದಿಲ್ಲ. ಅಗತ್ಯ ಸೇವೆ ಮತ್ತು ವೈದ್ಯಕೀಯ ಸೇವೆ ನೀಡಲು ಸಿದ್ಧ. ವೈದ್ಯರು, ನರ್ಸ್ಗಳನ್ನು ಅಲ್ಲಿಗೆ ಕಳುಹಿಸುತ್ತೇವೆ. ಆದರೆ ಕೇರಳ ಕಾಸರಗೋಡಿನ ಜನ ಕರ್ನಾಟಕಕ್ಕೆ ಬರಬಾರದು. ನಾವು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು.