ದೆಹಲಿ ಸಭೆಯಲ್ಲಿ ಭಾಗವಹಿಸಿ, ಚಿಕಿತ್ಸೆ ಪಡೆಯದವರನ್ನು ಗುಂಡಿಟ್ಟು ಕೊಲ್ಲಬೇಕು | ಸಚಿವ ರೇಣುಕಾಚಾರ್ಯ

ಏಪ್ರಿಲ್ 7 : ದೆಹಲಿಯ ನಿಜಾಮುದ್ದೀನ್ ಸಭೆಗೆ ಹೋಗಿ ಬಂದು ಕೊರೊನಾ ವೈರಸ್ ಹರಡುತ್ತಿದ್ದಾರೆ. ಇದು ಒಂದು ರೀತಿಯ ಭಯೋತ್ಪಾದನೆ ಇದ್ದಂತೆ, ಅವರೆಲ್ಲ ದೇಶದ್ರೋಹಿಗಳು. ಹೀಗಾಗಿ ತಬ್ಲಿಘಿ ಸಮಾವೇಶಕ್ಕೆ ಹೋಗಿ ಚಿಕಿತ್ಸೆ ಪಡೆಯದವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರು, ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳು ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ ಕೆಲವರು ಉದ್ದೇಶ ಪೂರ್ವಕವಾಗಿ ಆಸ್ಪತ್ರೆಗೆ ಬರದೇ ಸೋಂಕು ಹರಡುತ್ತಿದ್ದಾರೆ. ಲಾಕ್‍ಡೌನ್‍ನಿಂದ ಕೊರೊನಾ ವೈರಸ್ ಕಡಿಯೆಯಾಗುತ್ತಿತ್ತು. ಆದರೆ ಅಲ್ಲಿಂದ ಬಂದವರು ನೇರವಾಗಿ ವೈದ್ಯರ ಬಳಿ ಹೋಗಿದ್ದರೆ ಈ ರೀತಿಯ ಸಮಸ್ಯೆಯಾಗುತ್ತಿರಲಿಲ್ಲ. ಕೆಲವರು ಒಂದು ರೀತಿ ದೇಶದ್ರೋಹದ ಕೆಲಸವನ್ನು ಮಾಡುತ್ತಾರೆ ಎಂದು ಕಿಡಿಕಾರಿದರು.

ತಬ್ಲಿಘಿ ಸಮಾವೇಶಕ್ಕೆ ಹೋಗಿ ಬಂದು ಚಿಕಿತ್ಸೆ ಪಡೆಯದೇ ಎಸ್ಕೇಪ್ ಆಗುತ್ತಿದ್ದವರನ್ನು ಯಾರೂ ರಕ್ಷಣೆ ಮಾಡಬಾರದು. ಅಂತವರನ್ನು ಗುಂಡಿಟ್ಟು ಕೊಲೆ ಮಾಡಿದರೂ ತಪ್ಪಿಲ್ಲ. ಎಲ್ಲಾ ಅಲ್ಪಸಂಖ್ಯಾತರು ಭಯೋತ್ಪಾದಕರಲ್ಲ, ದೇಶದ್ರೋಹಿಗಳು ಅಲ್ಲ. ಆದರೆ ಒಬ್ಬರಿಂದ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Leave A Reply

Your email address will not be published.