ನಾಳೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಸಾಧ್ಯತೆ

ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾದ ನಂತರ ನೂತನ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿಲ್ಲ. ಹೀಗಾಗಿ ಉಳಿದ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಕೆಲವು ಸಚಿವರು ಎರಡು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದುಇದರಿಂದ ಸರಿಯಾಗಿ ಕೆಲಸ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಸುಲಭವಾಗುವಂತೆ ಎಲ್ಲಾ ಸಚಿವರುಗಳಿಗೆ ಉಸ್ತುವಾರಿ ಜವಾಬ್ದಾರಿ ನೀಡಬೇಕೆಂದು ಕೂಗು ಕೇಳಿ ಬಂದಿತ್ತು. ಹೀಗಾಗಿ ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು.

ಹಾಲಿ ಜಿಲ್ಲಾ ಉಸ್ತುವಾರಿಗಳ ಹೊಣೆಯನ್ನು ಮರು ಹಂಚಿಕೆ ಸಾಧ್ಯತೆಯಿದೆ. ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ರಾಮನಗರಕ್ಕೆ ಎಸ್.ಟಿ.ಸೋಮಶೇಖರ್, ಚಿಕ್ಕಬಳ್ಳಾಪುರಕ್ಕೆ ಸುಧಾಕರ್​, ಬಿ.ಸಿ.ಪಾಟೀಲ್​ ಅವರಿಗೆ ಹಾವೇರಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿಗೆ ಆನಂದ್ ಸಿಂಗ್ ನೇಮಕ ಸಾಧ್ಯತೆಯಿದೆ ಎನ್ನಲಾಗಿದೆ.

Leave A Reply

Your email address will not be published.