ಕೇರಳದಿಂದ ದೋಣಿ ಮೂಲಕ ಬಂದ 7 ಮಂದಿ ವಶಕ್ಕೆ | 14 ದಿನ ವೆನ್ಲಾಕ್‌ನಲ್ಲಿ ಹೋಂ ಕ್ವಾರಂಟೈನ್

ಕೇರಳದಿಂದ ದೋಣಿಯ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ ಏಳು ಜನರ ತಂಡವನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಮಂಗಳೂರು ಪ್ರವೇಶಿಸಿದ ಯಾಕೂಬ್ ಎಂಬವರು ಮತ್ತು ಆತನ ಕುಟುಂಬದ 6 ಮಂದಿಯನ್ನು ಬಂಧಿಸಿ, ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಕೊರೊನಾ ತಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಧಿಸಿದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಯಾಕೂಬ್ ಹಾಗೂ ಉಳಿದ ಆರು ಮಂದಿಯ ವಿರುದ್ದ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಇವರನ್ನು 14 ದಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಲಾಕ್ ಡೌನ್ ಸಂಬಂಧ ಕರ್ನಾಟಕ- ಕೇರಳ ಗಡಿ ಬಂದ್ ಆಗಿದ್ದು ಈ ಕಾರಣದಿಂದ, ಈ ಏಳು ಜನರು ದೋಣಿ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರು ಪ್ರವೇಶಿಸಿ ಅಡ್ಡೂರು ತಲುಪಿದ್ದರು.

ದೋಣಿ ಮತ್ತು ಏಳು ಜನರನ್ನು ಮಂಗಳೂರು ತಲುಪಿಸಿದವರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಇವರಿಗೆ ಸಹಾಯ ಮಾಡಿದವರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

Leave A Reply

Your email address will not be published.