ಆರೋಗ್ಯ ಸಹಾಯಕರಿಗೆ 3 ತಿಂಗಳಿನಿಂದ ಸಂಬಳ ಆಗಿಲ್ಲ, ಶೀಘ್ರ ಬಿಡುಗಡೆಗೊಳಿಸಿ | ಆಯನೂರು ಮಂಜುನಾಥ್

ಶಿವಮೊಗ್ಗ : ಕೊರೋನಾ ಸೋಂಕಿಗೆ ಒಳಗಾಗಿರುವವರ ವ್ಯಕ್ತಿಗಳ ಶುಶ್ರೂಷೆಗೆ ನಿಂತಿರುವ ಮತ್ತು ಹೋಂ ಕ್ವಾರಂಟೈನ್ ವ್ಯಕ್ತಿಗಳ ಮಾನಿಟರ್ ಮಾಡುತ್ತಿರುವ ಆರೋಗ್ಯ ಸಹಾಯಕರಿಗೆ ಆದಷ್ಟು ಬೇಗ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ, ಮೇಲ್ಮನೆಯ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು  ಒತ್ತಾಯಿಸಿದ್ದಾರೆ.

ಅವರು ಶನಿವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ವೇತನ‌‌  ಬಿಡುಗಡೆಯಾಗಿಲ್ಲ ಎಂದು ಆರೋಗ್ಯ ಸಹಾಯಕ, ಸಹಾಯಕಿಯರು ಅಳಲು ತೋಡಿಕೊಂಡಿದ್ದು, ಮಹಾಮಾರಿ ಕೊರೊನಾ ವೈರಸ್ ರೋಗ ಹೆಚ್ಚುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಆರೋಗ್ಯ ಸಹಾಯಕರು ಅಹರ್ನಿಶಿ ಎನ್ನದೇ ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಅದೆಷ್ಟೋ ಸಹಾಯಕರು ಮನೆಗೂ ಹೋಗದೇ ನಿರಂತರ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕೈ ಬಲಪಡಿಸಿರುವ ಆರೋಗ್ಯ ಸಹಾಯಕರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವುದು ವಿಷಾದನೀಯ. ಇದು ರಾಜ್ಯದ ಹಲವು ಆಸ್ಪತ್ರೆಗಳ ಸಹಾಯಕರ ನೋವು ಸಹ ಆಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಸರ್ಕಾರದ ಆರ್ಥಿಕ ಇಲಾಖೆಯಿಂದ ಆರೋಗ್ಯ ಸಹಾಯಕರಿಗೆ ಬಿಡುಗಡೆಯಾಗಬೇಕಿರುವ ವೇತನವನ್ನು ಬಿಡುಗಡೆಗೊಳಿಸುವಂತೆ ಆಯನೂರು ಮಂಜುನಾಥ್ ಮನವಿ ಮಾಡಿದ್ದಾರೆ.

ನಿಜಕ್ಕೂ ಇದು ವಿಷಾದನೀಯ ಸಂಗತಿಯಾ ಅಥವಾ ನಮಗೆ ಅವಮಾನವಾಗುವಂತಹ ಸಂಗತಿಯಾ ಅಥವಾ ಅಮಾನವೀಯ ಘಟನೆಯಾ ? ಹೇಳಬೇಕಾದವರು ಆರೋಗ್ಯ ಮಂತ್ರಿ ಶ್ರೀರಾಮುಲು.

Leave A Reply

Your email address will not be published.