ಕಾಂಗ್ರೆಸ್‍ನ ಹಿರಿಯ ಮುಖಂಡ ,ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಇನ್ನಿಲ್ಲ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.


Ad Widget

Ad Widget

Ad Widget

Ad Widget
Ad Widget

Ad Widget

ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


Ad Widget

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಲಹೆಗಾರರಾದ ರಾಜಶೇಖರನ್ 1928ರ ಸೆಪ್ಟೆಂಬರ್ 12 ರಂದು ರಾಮನಗರ ಜಿಲ್ಲೆಯ ಮರಲವಾಡಿಯಲ್ಲಿ ಜನಿಸಿದ್ದರು. ಎಂಎಲ್‍ಸಿ, ಸಂಸದ ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ರಾಜಶೇಖರನ್ ಅವರು ಸರಳತೆ, ನಮ್ರತೆ ಮತ್ತು ದೊಡ್ಡ ಪ್ರಬುದ್ಧತೆ ಹೊಂದಿದ ರಾಜಕಾರಣಿಯಾಗಿದ್ದರು.

error: Content is protected !!
Scroll to Top
%d bloggers like this: