ಲಾಕ್ ಡೌನ್ ಪರಿಹಾರವಲ್ಲ-ರಾಹುಲ್ ಗಾಂಧಿ | ಯಾಕೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಲಾಕ್ ಡೌನ್ ಅನ್ನು ಪಾಲಿಸುತ್ತಿದ್ದಾರೆ ? – ಬಿ.ಎಲ್. ಸಂತೋಷ್

ಏಪ್ರಿಲ್ 16 : “ ಲಾಕ್ ಡೌನ್ ಪರಿಹಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದು ನಿಜವೇ ಆಗಿದ್ದರೆ ಯಾಕೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಲಾಕ್ ಡೌನ್ ಅನ್ನು ಪಾಲಿಸುತ್ತಿದ್ದಾರೆ ? ” ಎಂದು ಬಿ.ಎಲ್. ಸಂತೋಷ್ ಟ್ವೀಟರ್ ಮೂಲಕ ಇಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ವ್ಯಾಪಿಸುವುದನ್ನು ತಡೆಯಲು ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶದಲ್ಲಿ ಕೊರೊನಾ ವೈರಾಣು ಸೋಂಕು ಎದುರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ, ಯೋಜಿತ ರೀತಿಯಲ್ಲಿ ವ್ಯಾಪಕವಾಗಿ ಕೊರೊನಾ ಪರೀಕ್ಷೆಗಳನ್ನು ನಡೆಸುವುದು ಸೂಕ್ತ ಪರಿಹಾರ ಎಂದು ಸಲಹೆ ನೀಡಿದ್ದರು. 

Comments are closed.