ಏಪ್ರಿಲ್ 20 ರ ನಂತರ ಲಾಕ್ ಡೌನ್ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ | ಐಟಿ ಬಿಟಿಗೆ ಅವಕಾಶ, ಮದ್ಯ ಇಲ್ಲ
ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ ಮಾಡಲಾಗಿದ್ದು, ಏಪ್ರಿಲ್ 20 ರ ನಂತರ ಐಟಿ, ಬಿಟಿ ಕ್ಷೇತ್ರದಲ್ಲಿ ಶೇ. 33 ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮೊನ್ನೆ 36, ನಿನ್ನೆ 44 ಕೊವಿಡ್ ಪ್ರಕಣಗಳು ವರದಿಯಾಗಿದ್ದವು. ಆದರೆ ಇಂದು 12 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಸಮಾಧಾನಕರ ವಿಚಾರ ಎಂದರು.
ತೆಗೆದುಕೊಂಡ ಕೆಲವು ಪ್ರಮುಖ ನಿರ್ಧಾರಗಳು:
- ಐಟಿ ಬಿಟಿ ಕಂಪೆನಿಗಳಲ್ಲಿ ಶೇ 33% ಕೆಲಸಗಾರರಿಗೆ ಅನುಮತಿ
- ಬೈಕ್ ಸವಾರರಿಗೆ ಬಿಗ್ ರಿಲೀಫ್. ಏ 20 ರಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುಮತಿ
- ಕಟ್ಟಡ ನಿರ್ಮಾಣ, ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ
- ಅಂತರ್ ಜಿಲ್ಲಾ ಸಂಚಾರ ನಿರ್ಬಂಧ ಮುಂದುವರಿಕೆ
- ಜಲ್ಲಿ, ಕಲ್ಲು, ಮರಳು, ಕಬ್ಬಿಣ ಸಾಗಾಟಕ್ಕೆ ಅನುಮತಿ ನೀಡಲಾಗಿದೆ
- ಎಲ್ಲಾ ಕಾರ್ಮಿಕರು ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ
- ಸೋಂಕಿತ ವ್ಯಕ್ತಿ ಗಳಿರುವ ಝೋನ್ ಗಳು ಕಂಪ್ಲೀಟ್ ಲಾಕ್ ಡೌನ್
- ಎಲ್ಲಾ ಕಾರ್ಮಿಕರು ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ
- ಸೋಂಕಿತ ವ್ಯಕ್ತಿ ಗಳಿರುವ ಝೋನ್ ಗಳು ಕಂಪ್ಲೀಟ್ ಲಾಕ್ ಡೌನ್
- ಮದ್ಯ ಮೇ 3 ರ ತನಕ ದೊರೆಯುವುದಿಲ್ಲ
Comments are closed.