ಬಂಟ್ವಾಳ|ಮಿನಿ ವಿಧಾನಸೌದದಲ್ಲಿ ಕೊರೊನಾ ತಡೆ| ತುರ್ತು ಸಭೆ

ಬಂಟ್ವಾಳದಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ, ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ತುರ್ತು ಸಭೆಯು ಇಂದೂ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು.

ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದು, ಸೀಲ್ ಡೌನ್ ಪ್ರದೇಶದ ಜನರಿಗೆ ಅವಶ್ಯಕ ಸಾಮಾಗ್ರಿ ಗಳನ್ನು ಕಂಟ್ರೋಲ್ ರೂಮ್ ಮೂಲಕ ತಲುಪಿಸುವುದು ಹಾಗೂ ಕರೋನಾ ಪ್ರಕರಣ ಕಂಡು ಬಂದ ವ್ಯಾಪ್ತಿಯಲ್ಲಿ ನಿರಂತರ ಆರೋಗ್ಯ ತಪಾಸಣೆ ನಡೆಸಲು ನಿರ್ಧರಿಸಲಾಯಿತು.

ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆಗೆ ಸೂಚಿಸಲಾಯಿತು. ಅನಿವಾರ್ಯ ಪರಿಸ್ಥಿತಿಯಲ್ಲಿ ಆಗುವ ಸಣ್ಣ ಪುಟ್ಟ ತೊಂದರೆಗಳನ್ನು ಜನರು ಸಹಿಸಿಕೊಳ್ಳುವುದರ ಜತೆಗೆ ಆರೋಗ್ಯ ತಪಾಸಣೆಗಾಗಿ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಮನೆ ಮನೆಗೆ ಬೇಟಿ ನೀಡುವ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಪೂರ್ಣ ಸಹಕಾರ ನೀಡುವಂತೆ ಜನರಲ್ಲಿ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ, ತಹಶೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟಿನ್ ಡಿ’ ಸೋಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಆಹಾರ ಶಿರಸ್ತೇದಾರ್ ಶ್ರೀನಿವಾಸ ಉಪಸ್ಥಿತರಿದ್ದರು.

Leave A Reply

Your email address will not be published.