ಪಾದರಾಯನ ಪುರ ಘಟನೆ | ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ | ಘಟನೆಯ ಬಗ್ಗೆ ಸಿಎಂ ಗರಂ !

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.

ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕ್ರಮಕೈಗೊಳ್ಳುತ್ತೇವೆ. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದೆಂಬ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪೊಲೀಸರಿಗೆ ಪುಲ್ ಪವರ್ ನೀಡಿದ್ದಾರೆ.

ಕೊರೋನಾ ವೈರಸ್​ ತೀವ್ರತೆ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸೀಲ್​ಡೌನ್ ಮಾಡಲಾಗಿತ್ತು. ಈ ಪ್ರದೇಶದಲ್ಲಿ ಕೊರೋನಾ ಸೋಂಕಿತರ ಜೊತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಭಾನುವಾರ ರಾತ್ರಿ ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳು ತೆರಳಿದ್ದರು.

ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಸೋಂಕಿತರ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಕ್ವಾರಂಟೈನ್​ನಲ್ಲಿರ ಈ ವೇಳೆ ಸ್ಥಳೀಯರು ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಕಾವೇರಿ ನಿವಾಸದಲ್ಲಿ ತುರ್ತು ಸಭೆ ನಡೆಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ರಾತ್ರಿಯೇ ಒಂದು ಸಭೆ ನಡೆಸಿದ್ದ ಸಿಎಂ ಬಿಎಸ್​ವೈ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.

ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭಾಗಿಯಾಗಿದ್ದಾರೆ.

ಪದೇಪದೆ ನಡೆಯುತ್ತಿರುವ ಇಂತಹ ಪ್ರಕರಣ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Leave A Reply

Your email address will not be published.