ಬೆಳ್ತಂಗಡಿ: ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದೆ.
ಕೃಷಿ, ಗ್ರಾಮೀಣ ಕ್ಷೇತ್ರಗಳಲ್ಲಿ ಸಡಿಲಿಕೆ ಮಾಡಿದ್ದೇವೆ. ಬಹುತೇಕವಾಗಿ ಕರ್ನಾಟಕದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ ಎಂದರು. ಏಪ್ರಿಲ್ 27 ಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.
ಮೇ ಮೂರರವರೆಗೆ ಲಾಕ್ ಡೌನ್ ಇರುತ್ತದೆ.ನಂತರ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.ಗ್ರೀನ್ ಝೋನ್‌ಗಳಲ್ಲಿ ಕಟ್ಟಡ ಕಾಮಗಾರಿ, ನರೇಗಾ ಕಾಮಗಾರಿ ನಡೆಸಲು ಅನುಮತಿ ನೀಡಲಾಗಿದೆ ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೊದಲಾದವರಿದ್ದರು.