ಸುಳ್ಯ|ಡಿಸಿಸಿ ಬ್ಯಾಂಕ್ ಮತ್ತು ನವೋದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾಕ್ಟರ್ ರಾಜೇಂದ್ರ ಕುಮಾರ್ ಅವರು ತಮ್ಮ ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸುಳ್ಯ ತಾಲೂಕು ಪತ್ರಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಸಹಕರಿಸಿದರು.

ರಾಷ್ಟ್ರವ್ಯಾಪ್ತಿ ಹಬ್ಬಿಕೊಂಡಿರುವ ಕರೋನವೈರಸ್ ನ ಮಹಾಮಾರಿ ಕಾಯಿಲೆಗೆ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರವು ಲಾಕ್ ಡೌನ್ ಘೋಷಿಸಿದ್ದು ಇದರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸುಮಾರು 1.82 ಕೋಟಿ ಮೊತ್ತವನ್ನು ಪರಿಹಾರ ನಿಧಿಗೆ ನೀಡುವ ಮೂಲಕ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿರುತ್ತಾರೆ. ಅದೇ ರೀತಿ ತಮ್ಮ ಸಂಸ್ಥೆಯ ವತಿಯಿಂದ ಸೈನಿಕರ ರೀತಿಯಲ್ಲಿ ಕೋರೋಣ ವೈರಸ್ಸಿನ ವಿರುದ್ಧ ಹೋರಾಟವನ್ನು ಮಾಡುತ್ತಿರುವ ಆಸ್ಪತ್ರೆಯ ಆಶಾ ಕಾರ್ಯಕರ್ತರು, ಹಾಗೂ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಲು ಹಗಲಿರುಳು ದುಡಿಯುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯಚರಿಸುತ್ತಿರುವ ಪತ್ರಕರ್ತರಿಗೆ ಅನುಕೂಲವಾಗುವಂತೆ ಸುಮಾರು ಮೂವತ್ತು ಲಕ್ಷ ರೂಪಾಯಿಗಳ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಿ ಪತ್ರಕರ್ತರ ಮತ್ತು ಆಶಾ ಕಾರ್ಯಕರ್ತರ ಸಂಕಷ್ಟದ ಸಮಯದಲ್ಲಿ ಸಹಾಯಹಸ್ತವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ನಿಮಿತ್ತ ಸುಳ್ಯ ತಾಲೂಕು ಪತ್ರಕರ್ತ ರಿಗೆ ಇಂದು ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.

ತಾಲೂಕ ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಕೆಎಸ್ ದೇವರಾಜ್, ಶಶಿಕುಮಾರ್ ರೈ ಬಾಲ್ಯಟು, ಎಸ್ ಪಿ
ಜಯರಾಮರ ರೈ ಭಾಗವಹಿಸಿದ್ದರು. ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ವಂದಿಸಿದರು.

Leave A Reply

Your email address will not be published.