ವೈಯಕ್ತಿಕ ನೆಲೆಯಲ್ಲಿ ಆಹಾರ ಕಿಟ್ ವಿತರಣೆ ಮಾಡಿದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿ

ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಪೆರಷನ್ಸ್ ವಿಭಾಗದ ಕಿರಿಯ ವಯಸ್ಸಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಚೇತನ್ ಕುಮಾರ್ ರವರು ವೈಯಕ್ತಿಕ ನೆಲೆಯಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಜ್ಪೆ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದ ಅನೇಕ ಕುಟುಂಬಗಳನ್ನು ಅವರು ಗುರುತಿಸಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

ಸರಕಾರ ಮತ್ತು ಸಂಘ ಸಂಸ್ಥೆಗಳ ಜತೆ ವ್ಯಕ್ತಿಗಳು ಕೂಡಾ ಬಡಜನರ ಸಹಾಯಕ್ಕೆ ಇಳಿದಿರುವುದು ಸಂತೋಷದ ಸಂಗತಿಯಾಗಿದೆ.

Leave A Reply

Your email address will not be published.