ಜೂನ್ ನಲ್ಲಿ SSLC ಪರೀಕ್ಷೆಗಳು ನಡೆಯಲಿವೆ | ಶೀಘ್ರ ವೇಳಾಪಟ್ಟಿ ಪ್ರಕಟ

ಎಸ್ಎಸ್ಎಲ್ ಸಿ ಪರೀಕ್ಷೆ ಗಳು ಜೂನ್ ತಿಂಗಳಿನಲ್ಲಿ ನಡೆಯಲಿವೆ. ಜೂನ್ ಎರಡನೇ ವಾರದಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಎಸೆಸೆಲ್ಸಿ ಪರೀಕ್ಷೆಗಳಿಗೆ ಎಲ್ಲ ತಯಾರಿಯನ್ನು ಮಾಡಿಕೊಳ್ಳುವಂತೆ ಆಯಾ ಪ್ರದೇಶದ ಡಿಡಿಪಿಐ ಗಡಿಗೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಸೂಚಿಸಿದ್ದರು.

ಎಲ್ಲಾ ಡಿಡಿಪಿಐ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮಾಡಿದ ಶಿಕ್ಷಣ ಸಚಿವರು ಈಗ ಒಂದು ನಿರ್ಧಾರಕ್ಕೆ ಬಂದಿದ್ದು ಜೂನ್ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲಾಕ್ ಡೌನ್ ಮುಗಿದ ನಂತರ ಎರಡು ವಾರಗಳ ಕಾಲ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಆನಂತರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಕೋರೋನಾ ಹಾವಳಿಯ ಸ್ಥಿತಿಗತಿಗಳನ್ನು ನೋಡಿಕೊಂಡು ವೇಳಾಪಟ್ಟಿ ಪ್ರಕಟವಾಗುವ ಸಂಭವವಿದೆ.

Leave A Reply

Your email address will not be published.