ದ.ಕ. ಜಿಲ್ಲೆಯಲ್ಲಿ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಮೇ.17 ರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಮಾಡುವಂತೆ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಸ್ ) ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಕೈಗೊಳ್ಳಲಾಗಿದೆ.

ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿರುವುದಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

Leave A Reply

Your email address will not be published.