ಗ್ರಾ. ಪಂ.ಚುನಾವಣೆ ಮುಂದೂಡಿಕೆ | ಆಡಳಿತ ಸಮಿತಿ / ಆಡಳಿತಾಧಿಕಾರಿ ನೇಮಿಸಲು ತೀರ್ಮಾನ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕೋವಿಡ್-19 ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಆ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸುವ ಕುರಿತು ತೀರ್ಮಾನಿಸಲಾಗಿದೆ.
ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.