ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಗಲ್ಫ್ ರಾಷ್ಟ್ರಗಳಿಂದ ಬೆದರಿಕೆ ಕರೆ !

ಬೆಂಗಳೂರು: ಮಧ್ಯ ಪೂರ್ವ ಮತ್ತು ಗಲ್ಪ್ ರಾಷ್ಟ್ರಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ,ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.

ಇತ್ತೀಚಿಗೆ ಕುವೈತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕೇರಳ ಮೂಲದ ಚಾಲಕನ ಮೇಲಿನ ಹಲ್ಲೆಯನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶೋಭಾ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕೇರಳದಲ್ಲಿ ಚಾಲಕನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ನಾನು ಅಮಿತ್ ಶಾ ಅವರಿಗೆ ಪತ್ರ ಬರೆದ ನಂತರ ಮಧ್ಯ ಪೂರ್ವ ಮತ್ತು ಗಲ್ಫ್ ರಾಷ್ಟ್ರಗಳಿಂದ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಮತ್ತು ಅಸಭ್ಯವಾಗಿ ನಿಂದಿಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.

ಅಮಿತ್ ಶಾ ಅವರಿಗೆ ಬರೆದ ಪತ್ರ

ಚಾಲಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕುವೈತ್ ಆಡಳಿತ ಕ್ರಮ ತೆಗೆದುಕೊಳ್ಳಬೇಕು ಮತ್ತು ವಿಚಾರಣೆಗಾಗಿ ಆರೋಪಿಗಳನ್ನು ಭಾರತಕ್ಕೆ ಒಪ್ಪಿಸಬೇಕು ಎಂದು ಅಮಿತ್ ಶಾಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದರು.

Leave A Reply

Your email address will not be published.