ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ

ನವದೆಹಲಿ, ಮೇ.11: ಭಾರತದ ಹಿರಿಯ ಆರ್ಥಿಕ ತಜ್ಞ, ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧ ತೊಂದರೆ ಕಂಡುಬಂದ ಹಿನ್ನಲೆಯಲ್ಲಿ ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ನಿನ್ನೆ ರಾತ್ರಿ 8:30 ರ ಸುಮಾರಿಗೆ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತಜ್ಞವೈದ್ಯರ ತಂಡವು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದು ಬಂದಿದೆ.

ಭಾರತದ ಆರ್ಥಿಕತೆಯ ಸುಧಾರಣಾ ಶಿಲ್ಪಿ ಎಂದು ಪ್ರಸಿದ್ಧಿ ಪಡೆದಿರುವ ಡಾ.ಮನಮೋಹನ್ ಸಿಂಗ್ ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದಾರೆ. ಪಿ.ವಿ.ನರಸಿಂಹರಾವ್ ಸರ್ಕಾರದ ಅವಧಿಯಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಸೇವೆ ಸಲ್ಲಿಸಿದ್ದರು.

10 ವರ್ಷಗಳರ, 2014 ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಡಾ.ಮನಮೋಹನ್ ಸಿಂಗ್ ಸೇವೆ ಸಲ್ಲಿಸಿದ್ದಾರೆ.

ಸರಳ ಸಜ್ಜನ, ಮಿತ ಭಾಷಿ, ಆರ್ಥಿಕತೆಯ ಧುರೀಣ ಮನಮೋಹನ್ ಸಿಂಗ್ ಅವರ ಆರೋಗ್ಯ ಬಹುಬೇಗ ಸುಧಾರಿಸಲಿ ಎನ್ನುವುದು ಬಹುತೇಕ ಭಾರತೀಯರ ಆಶಯ.

Leave A Reply

Your email address will not be published.