ನಾಳೆ ದುಬೈಯಿಂದ ಮಂಗಳೂರಿಗೆ ಬಂದಿಳಿಯಲಿದೆ ವಿಮಾನ|ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ|

ಮಂಗಳೂರು: ದುಬೈಯಲ್ಲಿರುವ ಭಾರತಿಯರನ್ನು ಹೊತ್ತ ವಿಮಾನ ನಾಳೆ ಮೇ 12ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದೆ‌.


ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.