ಶಿಕ್ಷಕರ ವರ್ಗಾವಣೆ ಕಾಯ್ದೆ ತಿದ್ದುಪಡಿ ಮಸೂದೆ | ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸಹಿತ ಹಲವು ಕಾಯ್ದೆಗಳಿಗೆ ರಾಜ್ಯ ಸಂಪುಟ ಅಸ್ತು


ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಕಾಯ್ದೆಗಳ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿ ಮಸೂದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಡಿಎ ಕಾಯ್ದೆ ತಿದ್ದುಪಡಿ, ಪಂಚಾಯತ್ ರಾಜ್ ನೇಮಕಾತಿ ಅನುಮೋದನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆಯನ್ನು ಸೂಚಿಸಿದೆ. ಅಲ್ಲದೇ ವಿವಾದ ನಡುವಲ್ಲೇ ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಸರಕಾರ ನಿರ್ಧರಿಸಿದೆ.

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಹೊರಟ ರಾಜ್ಯ ಸರ್ಕಾರದ ನಿರ್ಧಾರವನ್ನು ಅನೇಕರು ವಿರೋಧಿಸಿದ್ದರು. ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೆ ಸುಗ್ರೀವಾಜ್ಞೆ ಮೂಲಕ ಒಪ್ಪಿಗೆಯನ್ನು ರಾಜ್ಯ ಸಚಿವ ಸಂಪುಟ ಸಭೆ ನೀಡಿದೆ.

ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹಲವು ಅನಾನುಕೂಲಗಳು ಸಾಕಷ್ಟು ವರ್ಷಗಳಿಂದ ಸಮಸ್ಯೆಗಳನ್ನು ತಂದೊಡ್ಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿ ಮಾಡಿದೆ. ಇದರಿಂದ ವರ್ಗಾವಣೆ ಪ್ರಕ್ರಿಯೆ ಸರಳವಾಗಲಿದೆ.

Leave A Reply

Your email address will not be published.