ಕೋವಿಡ್ 19 |ದ.ಕ.ಜಿಲ್ಲೆಯಲ್ಲಿ 5ನೇ ಬಲಿ : ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದ ವೃದ್ದೆ ಸಾವು

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿನಿಂದ ಮೇ.14ರಂದು ಬೆಳಿಗ್ಗೆ 80 ವರ್ಷದ ವೃದ್ದೆಯೋರ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ಬಲಿ ಪಡೆದಿದೆ.

ಮಂಗಳೂರು ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರದಲ್ಲಿ ವೃದ್ದೆಯನ್ನು ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಇದೇ ವೃದ್ದೆಯ ಸಂಬಂಧಿಕರಿಗೂ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲದೇ ಸಂಪರ್ಕದಿಂದಲೇ ಭಟ್ಕಳಕ್ಕೂ ಸೋಂಕು ಹರಡಿದೆ ಎನ್ನಲಾಗುತ್ತಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ 5 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಎಲ್ಲರೂ ಕೂಡ 60 ವರ್ಷ ಮೇಲ್ಪಟ್ಟವರು ಹಾಗೂ ಎಲ್ಲರೂ ಮಹಿಳೆಯರೇ ಆಗಿದ್ದಾರೆ. ಇದೀಗ ಜಿಲ್ಲೆಯಲ್ಲಿ 5ನೇ ಬಲಿಯಾಗುತ್ತಿದ್ದಂತೆಯೇ ಜನರಲ್ಲಿ ಆತಂಕ ಶುರುವಾಗಿದೆ.

Leave A Reply

Your email address will not be published.