ಹೊರರಾಜ್ಯದಿಂದ ಮರಳಿದವರಿಗೆ ಆಯಾ ಗ್ರಾಮದಲ್ಲಿ ಕ್ವಾರಂಟೈನ್ | ಜನತೆ ಪ್ರತಿಭಟಿಸಿದರೆ ಪ್ರಕರಣ ದಾಖಲು

ಮಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿದ್ದವರು ತಮ್ಮ ತಮ್ಮ ಊರುಗಳಿಗೆ ಸರಕಾರದ ನಿಯಮಗಳಿಗೆ ಒಳಪಟ್ಟು ಬರುತ್ತಿದ್ದು, ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಯಾ ಇನ್ನಿತರೆ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಇಂತಹ ಸಂದರ್ಭಗಳಲ್ಲಿ ಯಾರಿಂದಲಾದರೂ ಈ ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ಯಾ ತಡೆ ಉಂಟು ಮಾಡಿದಲ್ಲಿ ಅಂತವರ ವಿರುದ್ಧ ಸಾಂಕ್ರಾಮಿಕ ತಡೆ ಕಾಯ್ದೆಯ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಊರಿಗೆ ಬರುತ್ತಿರುವವರು ಊರಿನವರೇ ಆಗಿದ್ದು, ಎಲ್ಲರ ಹಿತದೃಷ್ಟಿಯಿಂದಲೇ ಜಿಲ್ಲಾಡಳಿತವು ಪ್ರತ್ಯೇಕವಾಗಿ ಅವರನ್ನು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲೇ ಇರಿಕೊಳ್ಳಬೇಕಾದ ನಿಯಮವಿದ್ದು, ಅವರನ್ನು ಕರೆತರುವ ಸಮಯ ಎಲ್ಲ ರೀತಿಯ ಆರೋಗ್ಯ ತಪಾಸಣೆ ಮಾಡಲಾಗಿರುತ್ತದೆ.

ಎಲ್ಲರ ಹಿತದೃಷ್ಟಿಯಿಂದ ಕೇವಲ ನಿಗಾ ಇಡುವ ಸಲುವಾಗಿ ಕ್ವಾರಂಟೈನ್ ಮಾಡಲಾಗುತ್ತದೆಯೇ ಹೊರತು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಈ ಪ್ರಕ್ರಿಯೆಗೆ ಸಾರ್ವಜನಿಕರು ಸಹಕರಿಸಲು ಕೋರಿದೆ ಜೊತೆಗೆ ಇದರ ವಿರುದ್ಧ ಪ್ರತಿಭಟನೆ ಅಥವಾ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave A Reply

Your email address will not be published.