ನೆಲ್ಯಾಡಿ | ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ನೆಲ್ಯಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ 75 ರ ಗುಂಡ್ಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಾಗಾಟದ ಟ್ಯಾಂಕರೊಂದು ರಸ್ತೆಗೆ ಮಗುಚಿ ಬಿದ್ದ ಘಟನೆ ನಡೆದಿದೆ.

ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಇದಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ, ಆದರೆ ಯಾವುದೇ ಲೀಕೇಜ್ ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಮತ್ತು ನೆಲ್ಯಾಡಿ ಠಾಣೆಯ ಪೋಲೀಸರು, ಅಗ್ನಿಶಾಮಕ ದಳದವರು ಆಗಮಿಸಿದ್ದರು ಗ್ಯಾಸ್ ತುರ್ತುಸ್ಥಿತಿ ನಿವಾರಣೆ ವಾಹನ ಕೂಡಾ ಆಗಮಿಸಿದ್ದು ರಸ್ತೆ ತೆರವು ಕಾರ್ಯಚರಣೆ ನಡೆಯುತ್ತಿದೆ‌.

Leave A Reply

Your email address will not be published.